ಹುಬ್ಬಳ್ಳಿ: ಬೆಂಗಳೂರಿನಲ್ಲಿ ಮತ್ತು ರಾಯಚೂರಿನ ಮಾನ್ವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಪತ್ರಿಕಾ ಭವನದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆ ಖಂಡಿನೀಯ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮಾಧ್ಯಮ ಪ್ರತಿನಿಧಿಗಳ ಮೇಲೆ ಪದೇ ಪದೆ ಹಲ್ಲೆಗಳು ನಡೆಯುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೂಡಲೇ ಅಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ನಮಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು. ಸಂಘದ ಅಧ್ಯಕ್ಷ ಗಣಪತಿ ಗಂಗೊಳ್ಳಿ, ಪ್ರಧಾನ ಕಾರ್ಯದರ್ಶಿ ಸುಶಿಲೇಂದ್ರ ಕುಂದರಗಿ, ಉಪಾಧ್ಯಕ್ಷ ಜಗದೀಶ ಬುರ್ಲಬುಡ್ಡಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಇದ್ದರು.