ಧಾರವಾಡ: ಬರಪೀಡಿತ ನಿರಾಶ್ರಿತರಿಗೆ ಸ್ಪಂದಿಸದ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಕಳೆದ ಎರಡು ತಿಂಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಅಲ್ಲಿನ ಜನರು ಹಸಿವಿನಿಂದ ಸಾವಿನ ಅಂಚಿನಲ್ಲಿದ್ದು, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆಯೆಂದು ಆರೋಪಿಸಿದರು. ಸರ್ಕಾರ ಕೂಡಲೇ ನಿರಾಶ್ರಿತರಿಗೆ ಸ್ಪಂದಿಸಿ ಅವರಿಗೆ ಸೂರು ಹಾಗೂ ದೈನಂದಿನ ಬದುಕಿಗೆ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.