ETV Bharat / state

ಬ್ಯಾಂಕ್​ಗಳ ವಿಲೀನ, ಖಾಸಗೀಕರಣ ವಿರೋಧಿಸಿ ಬ್ಯಾಂಕ್​ ನೌಕರರ ಪಂಜಿನ ಮೆರವಣಿಗೆ - ‘Protest against the merging of nationalized banks

ರಾಷ್ಟ್ರೀಕೃತ ಬ್ಯಾಂಕ್​ಗಳ ವಿಲೀನ ಹಾಗೂ ಖಾಸಗೀಕರಣವನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸಲಾಯಿತು. ಪಂಜಿನ ಮೆರವಣಿಗೆಯು ಕಾಟನ್ ಮಾರ್ಕೆಟ್​ನಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಾರ್ಪೊರೇಷನ್ ಬ್ಯಾಂಕ್​ ಹಿಂಬದಿಯಲ್ಲಿ ಮುಕ್ತಾಯವಾಯಿತು.

Protest against the merging and privatization of nationalized banks
ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ, ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
author img

By

Published : Jan 11, 2020, 4:31 AM IST

ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್​ಗಳ ವಿಲೀನ ಹಾಗೂ ಖಾಸಗೀಕರಣವನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸಲಾಯಿತು.

ನಗರದ ಕಾಟನ್ ಮಾರ್ಕೆಟ್​ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾರ್ಪೊರೇಷನ್ ಬ್ಯಾಂಕ್​ ಹಿಂಬದಿಯಲ್ಲಿ ಅಂತ್ಯವಾಯಿತು. ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬ್ಯಾಂಕ್​ಗಳ ವಿಲೀನ ಹಾಗೂ ಖಾಸಗೀಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ಹುಬ್ಬಳ್ಳಿಯಲ್ಲಿ ಬ್ಯಾಂಕ್​ಗಳ ವಿಲೀನ, ಖಾಸಗೀಕರಣ ವಿರೋಧಿಸಿ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು

ಕೆನರಾ ಬ್ಯಾಂಕ್​, ಕರ್ನಾಟಕ ಬ್ಯಾಂಕ್, ಕಾರ್ಪೊರೇಷನ್‌ ಬ್ಯಾಂಕ್‌, ಎಸ್‌ಬಿಐ ಸೇರಿದಂತೆ ಇತರೆ ರಾಷ್ಟ್ರೀಕೃತ ಬ್ಯಾಂಕ್​ಗಳ ನೂರಾರು ಸಿಬ್ಬಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. 'ರಾಷ್ಟ್ರೀಕೃತ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಲಾಗುತ್ತಿದ್ದು, ಇದರಿಂದ ಬ್ಯಾಂಕ್‌ ನೌಕರರು ಮತ್ತು ಅಧಿಕಾರಿಗಳಿಗೆ ಅಭದ್ರತೆ ಕಾಡುತ್ತಿದೆ. ಇಂತಹ ನಿರ್ಧಾರಗಳು ಖಂಡನಾರ್ಹ' ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾಂಕ್​ಗಳಿಂದ ದೊಡ್ಡ ಮೊತ್ತದ ಸಾಲ ಪಡೆದು ಮರುಪಾವತಿಸದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಸಾಲ ವಸೂಲಾತಿ ಮಾಡಬೇಕು. ಇಲ್ಲವಾದಲ್ಲಿ ಬ್ಯಾಂಕ್​ಗಳು ದಿವಾಳಿ ಆಗಲಿವೆ. ಈ ಬಗ್ಗೆ ತುರ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಒತ್ತಾಯಿಸಿದರು. ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆಗೆ ಇತರೆ ಕಾರ್ಮಿಕ ಸಂಘಟನೆಗಳು ಸಹ ಬ್ಯಾಂಕ್ ನೌಕರರಿಗೆ ಬೆಂಬಲ ನೀಡಿ ಧರಣಿಯಲ್ಲಿ ಭಾಗವಹಿಸಿದ್ದವು.

Intro:ಹುಬ್ಬಳ್ಳಿ-07

ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ ಹಾಗೂ ಖಾಸಗೀಕರಣ ವಿರೋ­ಧಿಸಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು.

ನಗರದ ಕಾಟನ್ ಮಾರ್ಕೆಟ್ ದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾರ್ಪೋರೇಷನ್ ಬ್ಯಾಂಕ್ ಹಿಂದೆ ಬಹಿರಂಗ ಸಭೆ ನಡೆಸಿ ಖಾಸಗೀಕರಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆನರಾ, ಕರ್ನಾಟಕ, ವಿಜಯಾ, ಕಾರ್ಪೊರೇಷನ್‌ ಬ್ಯಾಂಕ್‌, ಎಸ್‌ಬಿಐ ಸೇರಿದಂತೆ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ 700ಕ್ಕೂ ಹೆಚ್ಚು ಸಿಬ್ಬಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
‘ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀ­ಕರಣ ಮಾಡಲಾಗುತ್ತಿದೆ. ಇದರಿಂದ ಬ್ಯಾಂಕ್‌ ನೌಕರರು ಮತ್ತು ಅಧಿಕಾರಿಗಳಿಗೆ ಅಭದ್ರತೆ ಕಾಡುತ್ತಿದೆ. ಅಲ್ಲದೆ ಬ್ಯಾಂಕುಗಳ ವಿಲೀನಗೊಳಿಸು­ತ್ತಿರುವುದು ಖಂಡನೀಯ’ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.
‘ಬ್ಯಾಂಕುಗಳಿಂದ ದೊಡ್ಡ ಮೊತ್ತದ ಸಾಲ ಪಡೆದು ಮರು ಪಾವತಿಸದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖ­ಲಿಸಿ ಸಾಲ ವಸೂಲಾತಿ ಮಾಡಬೇಕು. ಇಲ್ಲವಾದಲ್ಲಿ ಬ್ಯಾಂಕುಗಳು ದಿವಾಳಿ ಆಗಲಿವೆ. ಈ ಸಂಬಂಧ ಕ್ರಮ ಕೈಗೊಳ್ಳ­ಬೇಕು’ ಎಂದು ಒತ್ತಾಯಿಸಿದರು.
ಪಂಜಿನ ಮೆರವಣಿಗೆಯಲ್ಲಿ ಕನ್ನಡ ಪರ ಹೋರಾಟಗಾರರು ಸೇರಿದಂತೆ ಹಲವು ಸಂಘಟನೆಗಳು ಭಾಗವಹಿಸಿದ್ದರುBody:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.