ಹುಬ್ಬಳ್ಳಿ: ಪುಣೆ-ಬೆಂಗಳೂರು ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗಬ್ಬೂರು ಬೈಪಾಸ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಕಾರಣದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹು-ಧಾ ಪೊಲೀಸ್ ಕಮಿಷನರ್ ಲಾಭುರಾಮ್ ಪ್ರತಿಭಟನೆ ಕೈ ಬಿಡುವಂತೆ ಸೂಚಿಸಿದ್ರು. ಆಗಲೂ ಪ್ರತಿಭಟನೆ ನಿಲ್ಲಿಸದಿದ್ದಾಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆಯಿತು. ಇದರಿಂದ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಓದಿ:ಬೈಪಾಸ್ ರಸ್ತೆ ವಿಸ್ತರಣೆಗೆ ಆಗ್ರಹಿಸಿ ಪಾದಯಾತ್ರೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಎಚ್ಚೆತ್ತುಕೊಂಡು ರಾಷ್ಟ್ರೀಯ ಹೆದ್ದಾರಿ 4ನ್ನು ವಿಸ್ತರಿಸಬೇಕು. ಇಲ್ಲದೇ ಹೋದಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಂದಿನ ದಿನಗಳಲ್ಲಿಇನ್ನೂ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕರು ಎಚ್ಚರಿಸಿದರು.