ETV Bharat / state

ಧಾರವಾಡ ಡಿಸಿ ದೀಪಾ ಚೋಳನ್​​ ವರ್ಗಾವಣೆ ವಿರೋಧಿಸಿ ಕಾಂಗ್ರೆಸ್​​ನಿಂದ ಪ್ರತಿಭಟನೆ

ದೀಪಾ ಚೋಳನ್​​‌ ಜಿಲ್ಲಾಧಿಕಾರಿಯಾಗಿ ಬಂದ ನಂತರ ಜನಸಾಮಾನ್ಯರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಸರ್ಕಾರದ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಿ ಮನ ಗೆದ್ದಿದ್ದಾರೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಹೇಳಿದರು.

Protest by Congress in Dharwad
ಧಾರವಾಡದಲ್ಲಿ ಕಾಂಗ್ರೆಸ್​​ನಿಂದ ಪ್ರತಿಭಟನೆ
author img

By

Published : Jun 30, 2020, 4:06 PM IST

ಧಾರವಾಡ: ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ದೀಪಾ ಚೋಳನ್​ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಜಿಲ್ಲೆಯಲ್ಲಿ ಕಾಂಗ್ರೆಸ್​ನಿಂದ ವಿರೋಧ ವ್ಯಕ್ತವಾಗಿದೆ.

ಜಿಲ್ಲಾಧಿಕಾರಿ ದೀಪಾ ಚೋಳನ್​​​ ಅವರ ವರ್ಗಾವಣೆ ರದ್ದುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಮಹಿಳಾ ಕಾಂಗ್ರೆಸ್​​​ ವತಿಯಿಂದ ಜಿಲ್ಲಾಧಿಕಾರಿ ಕಚೇರಿ‌ ಎದುರು ಪ್ರತಿಭಟನೆ ನಡೆಸಲಾಯಿತು.

ದೀಪಾ ಚೋಳನ್​​ ವರ್ಗಾವಣೆ ವಿರೋಧಿಸಿ ಪ್ರತಿಭಟನೆ
ದೀಪಾ ಚೋಳನ್​​‌ ಅವರು ಜಿಲ್ಲಾಧಿಕಾರಿಯಾಗಿ ಬಂದ ನಂತರ ಜನಸಾಮಾನ್ಯರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಸರ್ಕಾರದ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಿ ಮನ ಗೆದ್ದಿದ್ದಾರೆ. ಜಿಲ್ಲೆಯಲ್ಲಿ ಅತಿವೃಷ್ಟಿ ಸೇರಿದಂತೆ ‌ಕ್ಲಿಷ್ಟಕರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದ್ದಾರೆ. ಸರ್ಕಾರ ಅವರ ವರ್ಗಾವಣೆ ಮಾಡಿರುವುದು ಖಂಡನೀಯ. ಈ ಕೂಡಲೇ ಅವರ ವರ್ಗಾವಣೆ ಆದೇಶ ರದ್ದುಗೊಳಿಸಿ ಜಿಲ್ಲೆಯಲ್ಲಿ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.