ಹುಬ್ಬಳ್ಳಿ : ಎನ್ಪಿಎಸ್ ಸೌಲಭ್ಯ , ಜ್ಯೋತಿ ಸಂಜೀವಿನಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಿಮ್ಸ್ ಶುಶ್ರೂಷಾ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಕಿಮ್ಸ್ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದ ರೀತಿ ಕರ್ತವ್ಯ ನಿರ್ವಹಿಸಿದ್ದೇವೆ. ಪಿಂಚಣಿ ಸೌಲಭ್ಯ, ಶೇ. 50 ಹೆಚ್ಚುವರಿ ಮೂಲ ವೇತನ ನೀಡಿ ಎಂದು ಒತ್ತಾಯಿಸಿದರು.
ಬೇಡಿಕೆ ಈಡೇರಿರುವವರೆಗೂ ಕಪ್ಪು ಪಟ್ಟಿ ಧರಿಸಿಯೇ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.