ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತ ಬಂದಿರುವ ಕಿಮ್ಸ್ ಆಸ್ಪತ್ರೆಯ ಶುಶ್ರೂಷಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಕೋವಿಡ್ ಕಾರ್ಯ ನಿರ್ವಹಿಸುತ್ತಿರುವ ವೇಳೆ ಪಿಪಿಇ ಕಿಟ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಮಾಸ್ಕ್ಗಳನ್ನ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆ ಈಡೇರಿಸಲು ಮನವಿಯನ್ನ ಸಿಇಓಗೆ ಸಲ್ಲಿಸಲು ಹೋದರೆ ನಮ್ಮ ಮೇಲೆಯೇ ದಬ್ಬಾಳಿಕೆ ಮಾಡಿದ್ದಾರೆ. ಅಲ್ಲದೇ ಎಲ್ಲರೂ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ಶುಶ್ರೂಷಕರು ಕಿಮ್ಸ್ ಸಿಎಓ ರಾಜೇಶ್ವರಿ ಜೈನಾಪುರ ವಿರುದ್ಧ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಭೇಟಿ ನೀಡಿದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಅವರು, ನರ್ಸ್ಗಳ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.