ಹುಬ್ಬಳ್ಳಿ : ಸಂಶಿ ಗ್ರಾಮದಲ್ಲಿ ಮಳೆ ನೀರು ಮನೆಗೆ ನುಗ್ಗಿ ಸುಮಾರು 20 ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಆದರೂ ಅಧಿಕಾರಿಗಳು ಮಾತ್ರ ಇತ್ತ ತಲೆ ಹಾಕದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆದು, ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದರು.
ಸಂಶಿ ಗ್ರಾಮಸ್ಥರು, ಹುಬ್ಬಳ್ಳಿ-ಲಕ್ಷ್ಮೇಶ್ವರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಸಂಶಿ ಉಪ ತಹಶೀಲ್ದಾರ್ ಹುಂಡೆಕಾರ್ಗೆ ತರಾಟೆ ತಗೆದುಕೊಂಡರು. ಚಿಕ್ಕ ಮಕ್ಕಳನ್ನು ಕಟ್ಟಿಕೊಂಡು ರಾತ್ರಿಯಿಂದ ಪರದಾಡುತ್ತಿದ್ದೇವೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ನಮ್ಮ ನೆರವಿಗೆ ಬಂದಿಲ್ಲ ಎಂದು ತರಾಟೆಗೆ ತಗೆದುಕೊಂಡರು. ಇದರಿಂದ ಕೆಲ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.