ಧಾರವಾಡ: ಗ್ಯಾಸ್ ಬೆಲೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್.ಯು.ಸಿ.ಐ ಸಂಘಟನೆ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಕಲಾ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಾಕಿ ಇರುವ ವೃದ್ಧಾಪ್ಯ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು. ರೇಷನ್ ಕಡಿತದ ಪ್ರಸ್ತಾಪ ಕೈ ಬೀಡಬೇಕು. ಪರಿಹಾರದ ಹಣವನ್ನು ಬಿಡುಗಡೆಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಗ್ಯಾಸ್ ದರ ಕಡಿಮೆ ಮಾಡಬೇಕು. ಗ್ಯಾಸ್ ಸಬ್ಸಿಡಿ ನಿಯಮಿತವಾಗಿ ಬ್ಯಾಂಕ್ಗೆ ಜಮಾ ಮಾಡಬೇಕು. ಹಾಲಿನ ದರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.