ಹುಬ್ಬಳ್ಳಿ: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಮತ್ತು ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಜನಸಂಖ್ಯೆಗೆ ಅನುಗುಣವಾಗಿ 7.5% ಮೀಸಲಾತಿ ಹೆಚ್ಚಿಸಲು ಅಗತ್ಯ ಕ್ರಮ ಜರುಗಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಮುಖಂಡರು, ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಅಗತ್ಯ ಕ್ರಮ ತೆಗೆದುಕೊಂಡು 7.5% ಮೀಸಲಾತಿ ಜಾರಿ ಮಾಡದೇ ಇದ್ದಲ್ಲಿ ಸರ್ಕಾರದ ವಿರುದ್ಧ ರಾಜ್ಯಾದಂತ ಉಗ್ರ ಹೋರಾಟ ಕೈಗೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಇದೇ ವೇಳೆ ಯಾದಗಿರಿಯಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಸರ್ಕರ ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಗೌರವ ಅಧ್ಯಕ್ಷ ಸಂತೋಷ ಗುಂಜಾಳ, ಮಂಜುನಾಥ ಹುಡೇದ, ಪರಮೇಶ್ವರಪ್ಪ ನಾಯ್ಕರ, ಭೀಮಪ್ಪ ದೊಡ್ಡಶಂಕರ ಮುಂತಾದವರು ಉಪಸ್ಥಿತರಿದ್ದರು.