ಹುಬ್ಬಳ್ಳಿ : ಕನ್ನಡಿಗರ ಉದ್ಯೋಗ ಮೀಸಲಾತಿಗಾಗಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕದಂಬ ಸೇನೆ ಸಹಯೋಗದಲ್ಲಿ ಫೆ.13ರಂದು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳಾಗಿದ್ದು, ಕನ್ನಡಿಗರ ಹಿತಾಸಕ್ತಿ ಕಾಪಾಡುವ ಮೂಲಕ ಹಾಗೂ ರಾಜ್ಯದ ನಿರುದ್ಯೋಗ ಪ್ರಮಾಣವನ್ನು ಇಳಿಕೆ ಮಾಡುವ ಉದ್ದೇಶದಿಂದ ಸದನದಲ್ಲಿ ಡಾ.ಸರೋಜಿನಿ ಮಹಿಷಿ ವರದಿಯನ್ನು ಮಂಡಿಸಬೇಕು ಎಂದರು.
ಫೆಬ್ರವರಿ17 ರಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ವರದಿಯನ್ನು ಮಂಡಿಸಿ ಕಾಯ್ದೆಯಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಪ್ರತಿಭಟನಾ ಮೆರವಣಿಗೆಯಲ್ಲಿ ರೈತ ಸಂಘಗಳು, ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ಸಾಹಿತಿಗಳು, ಚಲನಚಿತ್ರ ನಟ ನಟಿಯರು ಭಾಗವಹಿಸಲಿದ್ದಾರೆ ಎಂದರು.