ಹುಬ್ಬಳ್ಳಿ: ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಯಲ್ಲೇ ಆರಂಭಿಸಿ ಐಸಿಡಿಎಸ್ ಯೋಜನೆಯನ್ನು ಉಳಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ವತಿಯಿಂದ ಪ್ರತಿಭಟಿಸಲಾಯಿತು.
ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದ ಅವರು, ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಚಾಲಕರಾದ ಎನ್.ಎ.ಖಾಜಿ, ತಾಲೂಕು ಮುಖಂಡರು ಕಸ್ತೂರಿ ಬೇಂದ್ರೆ, ಕಾರ್ಯದರ್ಶಿ ಲತಾ ಘೋಡಕೆ, ರೇಖಾ ಮಿರಜಕರ, ಶೀಲಾ ಕುಲಕರ್ಣಿ, ಅಕ್ಕಮ್ಮ ಹಂಚನಾಳ ಸೇರಿದಂತೆ ಮುಂತಾದವರು ಇದ್ದರು.