ಧಾರವಾಡ: ಕಟ್ಟಡ ಕಾರ್ಮಿಕರಿಗೆ ಸಹಾಯಧನ ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ಕಟ್ಟಡ ಕಾರ್ಮಿಕ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಎಐಯುಟಿಯುಸಿ ವತಿಯಿಂದ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಾಮಾಜಿಕ ಅಂತರದೊಂದಿಗೆ ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಕೊರೊನಾ ಪರಿಣಾಮ ಕಟ್ಟಡ ಕಾರ್ಮಿಕರು ಕೆಲಸ-ಕಾರ್ಯಗಳು ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಹಾಗಾಗಿ ತಡವಾಗಿಯಾದರು ರಾಜ್ಯ ಸರ್ಕಾರ ಕಾರ್ಮಿಕರ ಸಹಾಯಕ್ಕೆ ಬಂದು 5,000 ಸಹಾಯಧನ ನೀಡಲು ಮುಂದಾಗಿತ್ತು. ರಾಜ್ಯ ಸರ್ಕಾರ ನೀಡುವ ಸಹಾಯಧನವನ್ನು ಖಾತ್ರಿ ಪಡಿಸಬೇಕು ಹಾಗೂ ಹೊಸ ನೋಂದಾಯಿತ ಕಟ್ಟಡ ಕಾರ್ಮಿಕರಿಗೂ ಸಹಾಯಧನವನ್ನು ವಿಸ್ತರಣೆ ಮಾಡಬೇಕು ಎಂದು ಅಗ್ರಹಿಸಿದರು.