ಧಾರವಾಡ: ಪೌರತ್ವ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ, ಸವಣೂರು ನವಾಬ್ ಮಸೀದಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ್ದ ಮುಸ್ಲಿಂ ಬಾಂಧವರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಜಿಲ್ಲಾಧಿಕಾರಿ ದೀಪಾ ಚೋಳನ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಕಾಯ್ದೆಗೆ ಈಗಾಗಲೇ ದೇಶದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗ್ತಿದೆ. ಪೌರತ್ವ ತಿದ್ದುಪಡಿ ಮಸೂದೆಯು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
ದೇಶದ ಆರ್ಥಿಕ ವ್ಯವಸ್ಥೆ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುವಂತಹ ಈ ಪೌರತ್ವ ತಿದ್ದುಪಡಿ ಮಸೂದೆ. ಎನ್ಆರ್ಸಿ, ಎನ್ಪಿಆರ್ ಕಾಯ್ದೆಯನ್ನು ರಾಷ್ಟ್ರಪತಿಗಳು ತಿರಸ್ಕರಿ ರದ್ದುಗೊಳಿಸಬೇಕು. ಈ ಪ್ರಜಾತಂತ್ರ ವಿರೋಧಿ ಹಾಗೂ ಮಾನವನ ಘನತೆಗೆ ಧಕ್ಕೆ ತರುವ ಕೃತ್ಯಗಳ ವಿರುದ್ಧ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿ ಎಚ್ಚರಿಕೆ ನೀಡಬೇಕು ಎಂದು ಒತ್ತಾಯಿಸಿದರು.