ಹುಬ್ಬಳ್ಳಿ : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆ ಕರೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘಟನೆ ಕಾರ್ಯಕರ್ತರು, ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ದಲಿತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆ ಸಭೆ ನಡೆಸಿಲ್ಲ. ಇದರಿಂದಾಗಿ ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ಆಗುತ್ತಿದೆ. ಆದ್ದರಿಂದ ಕೂಡಲೇ ಕುಂದು ಕೊರತೆಗಳ ಸಭೆ ಕರೆಯುವಂತೆ ಆಗ್ರಹಿಸಿದರು.