ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ನೂತನ ಶಿಕ್ಷಣ ನೀತಿ ರಾಜಾ ರಾಮ್ ಮೋಹನರಾಯ್, ಈಶ್ವರ ಚಂದ್ರ ವಿದ್ಯಾಸಾಗರ, ಜ್ಯೋತಿರಾವ್ ಫುಲೆ, ಸುಬ್ರಹ್ಮಣ್ಯ ಭಾರತಿ, ಭಾರತೀಯ ನವೋದಯದ ಮಹಾನ್ ಚಿಂತಕರು ಎತ್ತಿ ಹಿಡಿದ ವೈಜ್ಞಾನಿಕ, ಪ್ರಜಾಸತ್ತಾತ್ಮಕ, ಜಾತ್ಯಾತೀತ ಚಿಂತನೆ ಪ್ರಕ್ರಿಯೆಯನ್ನು ನಾಶಪಡಿಸುತ್ತದೆ ಎಂದು ದೂರಿದರು.
ಅಧಿಕಾರದಲ್ಲಿರುವ ಪಕ್ಷದ ಸಿದ್ಧಾಂತಕ್ಕೆ ಅನುಗುಣವಾಗಿ ಪಠ್ಯಕ್ರಮವನ್ನು ವಿರೂಪಗೊಳಿಸವುದು ಮತ್ತು ಕೋಮು ಭಾವನೆಗಳನ್ನು ಪ್ರಚೋದಿಸುತ್ತದೆ. ನಮ್ಮ ದೇಶದ ಏಕತೆ ಮತ್ತು ಸಮಗ್ರತೆಗೆ ಹಾನಿಕಾರಕವಾಗಿದೆ. ಹಾಗಾಗಿ ಕೂಡಲೇ ಹೊಸ ಶಿಕ್ಷಣ ನೀತಿ 2020 ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.