ಧಾರವಾಡ: ಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿ ಹಾಗೂ ವಿವಿಧ ಹಕ್ಕೊತ್ತಾಯ ಈಡೇರಿಸುವಂತೆ ಆಗ್ರಹಿಸಿ ಪೌರ ಕಾರ್ಮಿಕರ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಗುತ್ತಿಗೆ ಪೌರ ಕಾರ್ಮಿಕರು ಹಮ್ಮಿಕೊಂಡಿರುವ ಆಮರಣಾಂತ ಉಪವಾಸದ ಮೊದಲ ದಿನವಾದ ಇಂದು 10 ಪೌರ ಕಾರ್ಮಿಕರು ಉಪವಾಸ ಕೈಗೊಂಡು ಪೊರಕೆ ಚಳವಳಿ ನಡೆಸಿದರು. ರಾಜ್ಯ ಸರ್ಕಾರ ಗುತ್ತಿಗೆ ಪೌರ ಕಾರ್ಮಿಕರನ್ನು ನೇರ ನೇಮಕಾತಿ, ನೇರ ವೇತನದ ಅನ್ವಯ ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಆದರೂ ಕೂಡ ಪಾಲಿಕೆ ಅಧಿಕಾರಿಗಳು ಈ ಆದೇಶ ಪಾಲಿಸುತ್ತಿಲ್ಲ.
ಪೌರ ಕಾರ್ಮಿಕರ ಹಕ್ಕುಗಳನ್ನು ದೊರಕಿಸಿಕೊಡುವಲ್ಲಿ ಧಾರವಾಡ ಜಿಲ್ಲಾಡಳಿತ ಹಾಗೂ ಪಾಲಿಕೆ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.