ಹುಬ್ಬಳ್ಳಿ: ಲಾಕ್ಡೌನ್ ಸಡಿಲಿಕೆ ಮಾಡಿ ಹಲವು ವಾಣಿಜ್ಯ ವಲಯದ ಚಟುವಟಿಕೆಗಳಿಗೆ ಅನುಮತಿ ನೀಡಿರುವಂತೆ ರಾಜ್ಯದ ಚಿತ್ರಮಂದಿರಗಳ ಆರಂಭಕ್ಕೂ ಸರ್ಕಾರ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಕನ್ನಡ ಪರ ಮಹಾಮಂಡಳ ಕಾರ್ಯಕರ್ತರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
ಲಾಕ್ಡೌನ್ ಹಿನ್ನೆಲೆಯಲ್ಲಿ ಚಿತ್ರೋದ್ಯಮದ 15 ಸಾವಿರಕ್ಕೂ ಅಧಿಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕೂಡಲೇ ರಾಜ್ಯ ಸರ್ಕಾರ ಚಿತ್ರಮಂದಿರಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಮೂಲಕ ಚಿತ್ರೋದ್ಯಮವನ್ನು ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಅನುಕೂಲ ಮಾಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.