ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಕೂಲಿ ಕಾರ್ಮಿಕರು ಕುಂದಗೋಳ ಪಟ್ಟಣದ ತಹಸೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದೇ ವೇಳೆ ಪ್ರತಿಭಟನಾ ರೈತರು, ಸರ್ಕಾರ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಬೆಳೆ ವಿಮೆಯಲ್ಲಿ ನಡೆಯುತ್ತಿರುವ ತಾರತಮ್ಯ ಹೊಗಲಾಡಿಸಬೇಕು, ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಉದ್ಯೋಗ ಒದಗಿಸುವಲ್ಲಿ ಮುಂದಾಗಬೇಕು ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೇಜು ಬ್ಯಾಂಕ್ ತೆರೆಯುವ ಮೂಲಕ ರೈತರ ಹಸುಗಳಿಗೆ ಮೇವನ್ನು ಒದಗಿಸಬೇಕು ಎಂದು ಬೇಡಿಕೆ ಇಟ್ಟರು.
ಇದರೊಂದಿಗೆ ಮುಖ್ಯವಾಗಿ ತಾಲೂಕಿನಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸು ಕುರಿತು ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು.