ಹುಬ್ಬಳ್ಳಿ : ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಪಾಲಿಕೆ ವಿರುದ್ಧ ಆನಂದ ನಗರದ ನಿವಾಸಿಗಳು ಹಾಗೂ ದಲಿತ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು, ಕೆಲವು ತಿಂಗಳ ಹಿಂದೆ ಪಾಲಿಕೆಯಿಂದ ರಸ್ತೆಗೆ ತೇಪೆ ಹಚ್ಚುವ ಕಾರ್ಯ ಮಾಡಿದ್ದರು. ಆದರೆ ದಿನಕಳೆದಂತೆ ಮತ್ತೆ ಯಥಾಸ್ಥಿತಿಗೆ ಬಂದಿದ್ದು ಮತ್ತೆ ನಗರ ಧೂಳುಮಯವಾಗುತ್ತಿದೆ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.