ಹುಬ್ಬಳ್ಳಿ : ನಗರದ ಕಾರವಾರ ರಸ್ತೆಯ ಕಾಮಗಾರಿ ಪ್ರಾರಂಭವಾಗಿ ಸುಮಾರು 3 ರಿಂದ 4 ವರ್ಷಗಳು ಕಳೆದಿದೆ. ಆದರೆ, ಇಂದಿಗೂ ಕಾಮಗಾರಿ ಸಂಪೂರ್ಣಗೊಂಡಿಲ್ಲ. ಹೀಗಾಗಿ ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿಯಿದೆ.
ಕಾಮಗಾರಿ ಪೂರ್ಣಗೊಳ್ಳದ ಪರಿಣಾಮ ಈ ರಸ್ತೆ ಧೂಳಿನಿಂದ ಆವೃತ್ತವಾಗಿದ್ದು, ವಾಹನ ಸವಾರರು ಪರದಾಡಿಕೊಂಡು ಸಂಚರಿಸಬೇಕಾಗಿದೆ. ಮಳೆ ಸುರಿದ್ರೆ ರಸ್ತೆ ಸಂಪೂರ್ಣ ಕೆಸರುಗದ್ದೆಯಂತಾಗಿ ಪರಿವರ್ತನೆಯಾಗುತ್ತದೆ. ಇದರಿಂದಾಗಿ ಹಲವಾರು ಅಪಘಾತಗಳು ಸಂಭವಿಸಿವೆ. ಈ ರಸ್ತೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವುದರಿಂದ ಪ್ರತಿನಿತ್ಯ ಸಾವಿರಾರು ಸರಕು ಸಾಗಣಿಕೆ ವಾಹನಗಳು, ಕಾರವಾರಕ್ಕೆ ತೆರಳುವ ಬಸ್ಗಳು, ಕಲಘಟಗಿ ತಾಲೂಕಿನ ಗ್ರಾಮೀಣ ಭಾಗಕ್ಕೆ ತೆರಳುವ ಬಸ್ಗಳು ಸಂಚರಿಸುತ್ತವೆ.
ಆದ್ದರಿಂದ ಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.