ETV Bharat / state

ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಸಾರ್ವಜನಿಕ ಸಹಭಾಗಿತ್ವ ಅವಶ್ಯಕ: ಶೆಟ್ಟರ್

ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಸಾರ್ವಜನಿಕ ಸಹಭಾಗಿತ್ವದ ಅವಶ್ಯಕವಾಗಿದೆ ಎಂದು ಸಚಿವ ಜಗದೀಶ ಶೆಟ್ಟರ್ ಅಭಿಪ್ರಾಯ ಪಟ್ಟಿದ್ದಾರೆ.

ಜಗದೀಶ ಶೆಟ್ಟರ್ ಮಾತನಾಡಿದ್ದಾರೆ
author img

By

Published : Sep 29, 2019, 6:36 PM IST

ಹುಬ್ಬಳ್ಳಿ: ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಸಾರ್ವಜನಿಕ ಸಹಭಾಗಿತ್ವ ಅವಶ್ಯಕವಾಗಿದೆ ಎಂದು ಸಚಿವ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.

ಹು-ಧಾ ಮಹಾನಗರ ಪಾಲಿಕೆಯ ವತಿಯಿಂದ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಹೀ ಸೇವಾ ಹಾಗೂ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು, ಜಾಗೃತಿ ಮೂಡಿಸುವ ವಾಕಥಾನ್ ಮತ್ತು ಸೈಕ್ಲೊಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಚಿವ ಜಗದೀಶ್ ಶೆಟ್ಟರ್

ನಂತರ ಮಾತನಾಡಿದ ಅವರು, ದೇಶದ ಸ್ವಚ್ಚತಾ ಹಿತದೃಷ್ಟಿಯಿಂದ ಆಯೋಜಿಸಲಾಗಿರುವ ಅಭಿಯಾನ ಶ್ಲಾಘನೀಯವಾಗಿದೆ ಎಂದರು. ಪ್ಲಾಸ್ಟಿಕ್ ಉತ್ಪನ್ನಗಳಿಂದ ಪರಿಸರಕ್ಕೆ ದೊಡ್ಡ ಪ್ರಮಾಣದ ಹಾನಿಯಾಗುತ್ತಿದೆ. ಆದ್ದರಿಂದ ಎಸ್.ಯು‌.ಪಿ.(ಸಿಂಗಲ್ ಯೂಸ್ ಪ್ಲಾಸ್ಟಿಕ್)ಗಳನ್ನು ರದ್ದುಗೊಳಿಸುವಲ್ಲಿ ಸರ್ಕಾರ ಕೈಗೊಂಡಿರುವ ಯೋಜನೆಗೆ ಸಾರ್ವಜನಿಕರು ಬದ್ದರಾಗಿ ಕೈ ಜೋಡಿಸಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಪರಿಸರದ ಕನಸನ್ನು ನನಸು ಮಾಡಬೇಕು ಎಂದು ಹೇಳಿದ್ರು.

'ನಮ್ಮ ಪರಿಸರ ನಮ್ಮ ಆಸ್ತಿ', ಆದ್ದರಿಂದ ನಾವೆಲ್ಲ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಶ್ರಮಿಸೋಣ .ಈ ಸೈಕ್ಲೊಥಾನ್ ಅಭಿಯಾನ ಉತ್ತಮ ರೀತಿಯಲ್ಲಿ ಮುನ್ನಡೆಯಲಿ. ಜನರಲ್ಲಿ ಜಾಗೃತಿ ಮೂಡಿಸಲು ಅಭಿಯಾನ ಪ್ರೇರಣೆಯಾಗಲಿ ಎಂದು ಅವರು ಆಶಿಸಿದರು.

Intro:ಹುಬ್ಬಳಿBody:
ಸ್ಲಗ್: ಸ್ವಚ್ಛತಾ ಹೀ ಸೇವಾ ಹಾಗೂ ಏಕಬಳಕೆ ಪ್ಲಾಸ್ಟಿಕ್ ನಿಷೇಧ....ಅಭಿಯಾನ

ಹುಬ್ಬಳ್ಳಿ: ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಸಾರ್ವಜನಿಕ ಸಹಭಾಗಿತ್ವ ಅವಶ್ಯಕವಾಗಿದೆ ಎಂದು ಸಚಿವ ಜಗದೀಶ ಶೆಟ್ಟರ್ ಅಭಿಪ್ರಾಯ ಪಟ್ಟರು.
ಹುಧಾ ಮಹಾನಗರ ಪಾಲಿಕೆಯ ವತಿಯಿಂದ ನಗರದ ನೆಹರು ಮೈಧಾನದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಹೀ ಸೇವಾ ಹಾಗೂ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು, ಜಾಗೃತಿ ಮೂಡಿಸುವ ವಾಕ್ ಥಾನ್ ಮತ್ತು ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ಚಾಲನೇ ನೀಡಿದರು ಪ್ಲಾಸ್ಟಿಕ್ ಇನ್ನೂ ನಂತರ ಮಾತನಾಡಿದ ಅವರು, ದೇಶದ ಸ್ವಚ್ಚತಾ ಹಿತದೃಷ್ಟಿಯಿಂದ ಆಯೋಜಿಸಲಾಗಿರುವ ಅಭಿಯಾನ ಉತ್ತಮ ಹಾಗೂ ಶ್ಲಾಘನೀಯವಾಗಿದೆ ಎಂದರು. ಪರಿಸರಕ್ಕೆ ದೊಡ್ಡ ಪ್ರಮಾಣದ ಹಾನಿಯಿರುವುದು ಪ್ಲಾಸ್ಟಿಕ್ ಉತ್ಪನ್ನಗಳಿಂದ ಆದ್ದರಿಂದ ಎಸ್.ಯು‌.ಪಿ.(ಸಿಂಗಲ್ ಯೂಸ್ ಪ್ಲಾಸ್ಟಿಕ್) ಗಳನ್ನು ರದ್ದುಗೊಳಿಸುವಲ್ಲಿ ಸರ್ಕಾರ ಕೈಗೊಂಡಿರುವ ಯೋಜನೆಗೆ ಸಾರ್ವಜನಿಕರು ಬದ್ದರಾಗಿ ಕೈ ಜೋಡಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಪರಿಸರದ ಕನಸನ್ನು ನನಸು ಮಾಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಮ್ಮ ಪರಿಸರ ನಮ್ಮ ಆಸ್ತಿ ಆದ್ದರಿಂದ ನಾವೇಲ್ಲ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಶ್ರಮಿಸೋಣ ಈ ಸೈಕ್ಲೋಥಾನ್h ಅಭಿಯಾನ ಉತ್ತಮ ರೀತಿಯಲ್ಲಿ ಮುನ್ನಡೆಯಲಿ ಜನರಲ್ಲಿ ಜಾಗೃತಿ ಮೂಡಿಸಲು ಅಭಿಯಾನ ಪ್ರೇರಣೆಯಾಗಲಿ ಎಂದು ಅವರು ಆಶಿಸಿದರು.
ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಸವರಾಜ ‌ಹೊರಟ್ಟಿ, ಸ್ವಚ್ಛ ಪರಿಸರವೇ ನಮ್ಮೆಲ್ಲರ ಆಸ್ತಿಯಾಗಿದೆ.ಉತ್ತಮ ಪರಿಸರದಿಂದ ಮಾತ್ರವೇ ಉತ್ತಮ ಆರೋಗ್ಯ, ಉತ್ತಮ ಪರಿಸ್ಥಿತಿ ಕಂಡುಕೊಳ್ಳಲು ಸಾಧ್ಯ ಈ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಅಭಿಯಾನಕ್ಕೆ ಜಯವಾಗಲಿ‌ ಎಂದು ಅವರು ಹಾರೈಸಿದರು.ಇನ್ನೂ ಪ್ಲಾಸ್ಟಿಕ್ ಮುಕ್ತ ಧಾರವಾಡ ಜಿಲ್ಲೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು ಇವೊಂದು ಅಭಿಯಾನದಲ್ಲಿ ನೂರಾರು ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿ ವಿವಿಧ ‌ನಗರಗಳಲ್ಲಿ ತೆರಳಿ ಜಾಗೃತಿ ಮೂಡಿಸಿದ್ರು. ಇದೇ ಸಂದರ್ಭದಲ್ಲಿ ಮಾಜಿ ಸಭಾಪತಿ ಬಸವರಾಜ ಹೋರಟ್ಟಿ ಸಾತ್ ನೀಡಿದರು....

ಬೈಟ್:- ಜಗದೀಶ್ ಶೆಟ್ಟರ್: ಸಚಿವರು.

__________________Conclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.