ETV Bharat / state

ಬಾಲಕಿಯರಿಂದ ಸಾರ್ವಜನಿಕ ಶೌಚಾಲಯ ಸ್ವಚ್ಛತೆ: ಸಂಬಂಧಿತರಿಗೆ ನೋಟಿಸ್ - minor girl cleanup public toilet

ಬಾಲಕಿಯರಿಂದ ಶೌಚಾಲಯವನ್ನು ಸ್ವಚ್ಛಗೊಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೌಚಾಲಯ ನಿರ್ವಹಣೆ ಗುತ್ತಿಗೆದಾರರಿಗೆ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ನೋಟಿಸ್​ ಜಾರಿಗೊಳಿಸಿದ್ದಾರೆ.

Public toilet cleanup from minor girls
ಶೌಚಾಲಯ ನಿರ್ವಹಣೆ ಗುತ್ತಿಗೆದಾರರಿಗೆ ನೋಟಿಸ್
author img

By

Published : Oct 5, 2020, 8:08 PM IST

ಧಾರವಾಡ: ನಗರದ ಸಿಬಿಟಿ ಹತ್ತಿರವಿರುವ ಸಾರ್ವಜನಿಕ ಶೌಚಾಲಯದಲ್ಲಿ ಬಾಲಕಿಯರಿಂದ ಶೌಚಾಲಯವನ್ನು ಸ್ವಚ್ಛಗೊಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ವಿವಿಧ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸುದ್ದಿ ಹರಿದಾಡುತ್ತಿರುವುದನ್ನು ಗಮನಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಿಸಿದವರಿಗೆ ನೋಟಿಸ್ ನೀಡಿದ್ದಾರೆ.

Public toilet cleanup from minor girls
ನೋಟಿಸ್

ಬಾಲ ಕಾರ್ಮಿಕ ನಿಷೇಧ ಕಾಯ್ದೆಯಡಿ ಈ ಕೃತ್ಯವು ಅಪರಾಧವಾಗಿದ್ದು, 1986ರ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ & ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ಅನ್ವಯ 2 ವರ್ಷ ಜೈಲು ಹಾಗೂ ರೂ 50,0000 ವರೆಗೆ ದಂಡವಿರುತ್ತದೆ. ಈ ಕುರಿತು ಅ. 6 ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆವರಣದಲ್ಲಿರುವ ಸ್ತ್ರೀ ಶಕ್ತಿ ಭವನದಲ್ಲಿ ನಡೆಯುವ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ವಿಚಾರಣೆ ಹಾಜರಾಗಲು ಶೌಚಾಲಯ ನಿರ್ವಹಣೆ ಗುತ್ತಿಗೆದಾರರಿಗೆ ಸೂಚಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.