ETV Bharat / state

ಪೋಲಿಯೊ ಲಸಿಕೆ ಅಭಿಯಾನ; ಧಾರವಾಡ ಜಿಲ್ಲಾದ್ಯಂತ 211740 ಮಕ್ಕಳಿಗೆ ಲಸಿಕೆ ನೀಡುವ ಗುರಿ - pulse polio Immunisation programme

ಧಾರವಾಡದಲ್ಲಿ ಇಂದು ಪಲ್ಸ್​ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್​ ಪಾಟೀಲ ಚಾಲನೆ ನೀಡಿದ್ದು, ಜಿಲ್ಲೆಯಲ್ಲಿ 900 ಬೂತ್ (ಕೇಂದ್ರ)ಗಳಲ್ಲಿ ನವಜಾತ ಶಿಶುಗಳು ಸೇರಿದಂತೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುವುದು. ಫೆಬ್ರವರಿ 1 ರಿಂದ 3 ರ ವರೆಗೆ ಮನೆ-ಮನೆಗೆ ತೆರಳಿ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

pulse polio Immunisation programme launches in dharwad
ಧಾರವಾಡ
author img

By

Published : Jan 31, 2021, 12:53 PM IST

ಧಾರವಾಡ: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಇಂದು ಬೆಳಗ್ಗೆ ಚಾಲನೆ ದೊರೆಯಿತು.

ಜಿಲ್ಲಾಧಿಕಾರಿ ನಿತೇಶ್​ ಪಾಟೀಲ ಹಾಗೂ ಜಿಲ್ಲಾ ಪಂಚಾಯತ್​​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ. ಅವರು ಬೆಳಗ್ಗೆ ನಗರದ ಹಳೆ ಬಸ್‍ನಿಲ್ದಾಣದ ಹತ್ತಿರವಿರುವ ಪಾಲಿಕೆಯ ಆಸ್ಪತ್ರೆಯಲ್ಲಿ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಧಾರವಾಡ

ನಂತರ ಜಿಲ್ಲಾಧಿಕಾರಿ ನಿತೇಶ್​ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 900 ಬೂತ್ (ಕೇಂದ್ರ)ಗಳಲ್ಲಿ ನವಜಾತ ಶಿಶುಗಳು ಸೇರಿದಂತೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುವುದು. ಫೆಬ್ರವರಿ 1 ರಿಂದ 3 ರ ವರೆಗೆ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುವುದು ಎಂದರು.

ನಗರ ಪ್ರದೇಶದಲ್ಲಿನ 132319, ಗ್ರಾಮೀಣ ಪ್ರದೇಶದಲ್ಲಿನ 79421 ಮಕ್ಕಳು ಸೇರಿ ಐದು ವರ್ಷದೊಳಗಿನ ಒಟ್ಟು 211740 ಮಕ್ಕಳಿಗೆ ಲಸಿಕೆ ಹಾಕಲು ಗುರುತಿಸಲಾಗಿದೆ. ಫೆಬ್ರವರಿ 1 ರಿಂದ 3 ರವರೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಜಿಲ್ಲೆಯ 415675 ಮನೆಗಳಿಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ಮನೆ ಮನೆಗೆ ತೆರಳಿ ಲಸಿಕೆ ಹಾಕಲು 1785 ತಂಡಗಳನ್ನು ರಚಿಸಲಾಗಿದೆ. ಈ ರಾಷ್ಟ್ರೀಯ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಜಿಲ್ಲೆಯ ಸಂಘ ಸಂಸ್ಥೆಗಳು ಕೈಜೋಡಿಸಿ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು.

ಇದನ್ನೂ ಓದಿ:ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಶಿಕಲಾ: ಘೋಷಣೆ ಕೂಗಿ ಅಭಿಮಾನಿಗಳಿಂದ ಸ್ವಾಗತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.