ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಐದು ಜನ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣದಿಂದ ಪ್ರಾರಂಭವಾದ ಜಗಳ ವಿಕೋಪಕ್ಕೆ ತಿರುಗಿ ಸವರ್ಣೀಯರು ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಐದು ಜನರಿಗೆ ಗಂಭೀರ ಗಾಯಗಳಾಗಿವೆ.
ತಿಪ್ಪಣ್ಣ ಮಾಳಗಿಮನಿ, ರಾಘವೇಂದ್ರ, ದುರ್ಗೆಶ್, ಪರಶುರಾಮ, ಗೋವಿಂದ ಎಂಬುವರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.