ETV Bharat / state

ಜನದಟ್ಟಣೆ ತಗ್ಗಿಸಲು ರೈಲ್ವೆ ಫ್ಲಾಟ್‌ಫಾರಂ ಟಿಕೆಟ್ ದರ ಹೆಚ್ಚಿಸಿದ ನೈರುತ್ಯ ರೈಲ್ವೆ

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ರೈಲ್ವೆ ಫ್ಲಾಟ್ ಫಾರಂ ಜನ ದಟ್ಟಣೆ ತಪ್ಪಿಸಲು ಫ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಳ ಮಾಡಿರುವುದಾಗಿ ನೈರುತ್ಯ ರೈಲ್ವೆ ವಲಯ ತಿಳಿಸಿದೆ.

author img

By

Published : Oct 19, 2022, 9:39 PM IST

Railway flat form ticket price increase
ರೈಲ್ವೆ ಫ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಳ

ಹುಬ್ಬಳ್ಳಿ: ಹಬ್ಬ ಹರಿದಿನಗಳಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ರೈಲು ನಿಲ್ದಾಣದಲ್ಲಿ ಜನದಟ್ಟಣೆ ತಗ್ಗಿಸಲು ಮುಂದಾಗಿರುವ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು, ತನ್ನ ವ್ಯಾಪ್ತಿಯ ಹುಬ್ಬಳ್ಳಿ-ಧಾರವಾಡ ಸೇರಿದಂತೆ ನೈರುತ್ಯ ರೈಲ್ವೆ ವಲಯದ ಎಲ್ಲಾ ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಟಿಕೆಟ್ ದರವನ್ನು ತಾತ್ಕಾಲಿಕವಾಗಿ 10 ರೂಪಾಯಿ ಹೆಚ್ಚಳ ಮಾಡಿದೆ.

ಪ್ಲಾಟ್ ಫಾರಂ ಟಿಕೆಟ್ ದರ 20ಕ್ಕೆ ಏರಿಸಲಾಗಿದೆ. ಪ್ರಯಾಣಿಕರಿಗೆ ಪ್ಲಾಟ್‌ಫಾರಂಗಳಲ್ಲಿ ಓಡಾಟಕ್ಕೆ ಮುಕ್ತ ಅವಕಾಶ ಮಾಡಿಕೊಡಲು ಟಿಕೆಟ್ ದರವನ್ನು ತಾತ್ಕಾಲಿಕವಾಗಿ ಹೆಚ್ಚಿಸಲಾಗಿದೆ. ಹಬ್ಬ ಇರುವುದರಿಂದ ವಿದಾಯ ಹೇಳಲು ನಿಲ್ದಾಣಕ್ಕೆ ಬರುವವರ ಸಂಖ್ಯೆ ಹೆಚ್ಚಳವಾಗಲಿದ್ದು ಈ ನಿರ್ಧಾರ ಕೈಗೊಳ್ಳಲಾಗಿದೆ.

ನೈರುತ್ಯ ರೈಲ್ವೆ ವಲಯದ ಫ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಳ

ಅಕ್ಟೋಬರ್​ 30 ರವರೆಗೆ ತಾತ್ಕಾಲಿಕವಾಗಿ ಹುಬ್ಬಳ್ಳಿ ಶ್ರೀ ಸಿದ್ದಾರೂಢ ರೈಲು ನಿಲ್ದಾಣದ ಸೇರಿದಂತೆ ಬೆಂಗಳೂರು, ಮೈಸೂರು ಸೇರಿದಂತೆ ತನ್ನ ವ್ಯಾಪ್ತಿಯ ಎಲ್ಲಾ ನಿಲ್ದಾಣಗಳ ಪ್ಲಾಟಪಾರಂ ದರ ಹೆಚ್ಚಿಸಲಾಗಿದೆ.

ಪ್ರಯಾಣಿಕರು ಅಥವಾ ಜನರು ರೈಲು ನಿಲ್ದಾಣಕ್ಕೆ ಹೆಚ್ಚಾಗಿ ಬಂದರೆ ರೈಲ್ವೆಯ ಆದಾಯ ಹೆಚ್ಚಲಿದೆ. ಅಂತಹ ಸಂದರ್ಭದಲ್ಲಿ ದರ ಹೆಚ್ಚಿಸುವ ಬದಲು ಕಡಿಮೆ ಮಾಡಬೇಕು. ನೈರುತ್ಯ ರೈಲ್ವೆಯವರು ಕೈಗೊಂಡಿರುವ ಈ ತಪ್ಪು ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಇದು ಪ್ರಯಾಣಿಕರಿಂದ‌ ಅನಗತ್ಯ ಹಣ ಗಳಿಸುವ ಹುನ್ನಾರ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಿಂದ ಶಬರಿಮಲೆ, ವಾರಣಾಸಿಗೆ ವಿಶೇಷ ರೈಲು ಸೇವೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.