ETV Bharat / state

ಕೃಷಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಾಳೆ ರೈಲು ತಡೆ ಚಳವಳಿ - ನಾಳೆ ದೇಶಾದ್ಯಂತ ರೈಲು ತಡೆ ಚಳವಳಿ

ರಾಜ್ಯ ಐಕ್ಯ ಹೋರಾಟ ಸಮಿತಿ ರೈಲು ತಡೆ ಚಳವಳಿಗೆ ಕರೆ ನೀಡಿದ್ದು, ನಾಳೆ ರಾಜ್ಯಾದ್ಯಂತ 3 ಗಂಟೆಗಳ ಕಾಲ ಚಳವಳಿ ನಡೆಯಲಿದೆ. ಇದಕ್ಕೆ ಧಾರವಾಡದ ರೈತರು ಬೆಂಬಲ ಸೂಚಿಸಿದ್ದು, ರೈಲ್ವೆ ನಿಲ್ದಾಣದಲ್ಲಿ ರೈಲು ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಾಳೆ ರೈಲು ತಡೆ ಚಳವಳಿ
Railway Ruko Movement Tomorrow Against Central Govt
author img

By

Published : Feb 17, 2021, 2:52 PM IST

ಧಾರವಾಡ: ನಾಳೆ ರಾಜ್ಯ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ದೇಶಾದ್ಯಂತ ರೈಲು ತಡೆ ಚಳವಳಿ ನಡೆಯಲಿದ್ದು, ಇದನ್ನು ಬೆಂಬಲಿಸಿ ನಗರದಲ್ಲೂ ಪ್ರತಿಭಟನೆ ನಡೆಸಲು ರೈತರು ಸಜ್ಜಾಗಿದ್ದಾರೆ.

ಈಟಿವಿ ಭಾರತದೊಂದಿಗೆ ಮಾತನಾಡಿರುವ ರೈತ ಮುಖಂಡ ಕಲ್ಮೇಶ ಲಿಗಾಡೆ

ದೆಹಲಿ ರೈತರ ಹೋರಾಟವನ್ನು ಬೆಂಬಲಿಸಿ ರಾಜ್ಯಾದ್ಯಂತ ಮಧ್ಯಾಹ್ನ 12ರಿಂದ 4 ಗಂಟೆವರೆಗೆ ರೈಲು ತಡೆ ಚಳವಳಿ ನಡೆಯಲಿದ್ದು, ಕೃಷಿ ಕಾಯ್ದೆ ವಿರೋಧಿಸಿ ಹಾಗೂ ದೆಹಲಿ ರೈತರ ಹೋರಾಟ ಬೆಂಬಲಿಸಿ ಚಳವಳಿ ನಡೆಯುತ್ತಿದೆ. ಇದಕ್ಕೆ ಧಾರವಾಡದ ರೈತರು ಬೆಂಬಲ ಸೂಚಿಸಿದ್ದಾರೆ.

ಈ ಕುರಿತೆ ರೈತ ಮುಖಂಡ ಕಲ್ಮೇಶ ಲಿಗಾಡೆ ಈಟಿವಿ ಭಾರತದೊಂದಿಗೆ ಮಾತನಾಡಿದ್ದು, ನಾಳೆ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ರೈಲು ತಡೆದು ಪ್ರತಿಭಟನೆ ನಡೆಸುತ್ತೇವೆ. ಕಳೆದ 80 ದಿನಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅನ್ನದಾತರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಇತ್ತ ಕಡೆ ಗಮನ ಹರಿಸುತ್ತಿಲ್ಲ. ಈ ಕುರಿತಂತೆ ಅರಿವು ಮೂಡಿಸುವ ಸಲುವಾಗಿ ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಓದಿ: ನಾಳೆ ರಾಜ್ಯಾದ್ಯಂತ ರೈಲು ತಡೆ ಚಳವಳಿ: ರಾಜ್ಯ ಐಕ್ಯ ಹೋರಾಟ ಸಮಿತಿ ನೇತೃತ್ವ

ಕೇಂದ್ರ ಸರ್ಕಾರ ಕರಾಳ ಕೃಷಿ ಕಾಯ್ದೆ ಜಾರಿಗೊಳಿಸಿದೆ. ದೆಹಲಿಯಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳಬೇಕೆಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.