ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಮತ್ತೊರ್ವ ಜೆಡಿಎಸ್ ಹಿರಿಯ ಮುಖಂಡ ಪಕ್ಷ ತೊರೆದು ಕಮಲ ಪಾಳಯ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಣ್ಣ ಕೊರವಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಣ್ಣ ಕೊರವಿ ಹುಬ್ಬಳ್ಳಿ ಧಾರವಾಡದಲ್ಲಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೇ ಜೆಡಿಎಸ್ ಪಕ್ಷದಿಂದ ಜಗದೀಶ ಶೆಟ್ಟರ್ ವಿರುದ್ಧ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.
ಆದರೆ, ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಬೇಸತ್ತ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯರಾಗಿ ರಾಜಣ್ಣ ಕೊರವಿ ಸೇವ ಸಲ್ಲಿಸಿದ್ದು, ಇದೀಗ ಬಿಜೆಪಿಯೆಡೆಗೆ ಒಲವು ತೋರಿದ್ದು, ಜ.23ಕ್ಕೆ ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.