ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರಿಗೆ ಬಡ್ತಿ ನೀಡಿ ಐಜಿಪಿ ಇಂಟಲಿಜೆನ್ಸ್ ವಿಭಾಗಕ್ಕೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ಗೆ ಪೊಲೀಸ್ ಆಯುಕ್ತರಾಗಿ ರಮಣ್ ಗುಪ್ತಾ ಆಗಮಿಸಲಿದ್ದಾರೆ.
ಲಾಬೂರಾಮ್ ಹು -ಧಾ ಮಹಾನಗರ ಪೊಲೀಸ್ ಆಯುಕ್ತ ಸುಮಾರು ದಿನಗಳ ಕಾಲ ಸೇವೆ ಸಲ್ಲಿಸಿದ್ದು, ಈಗ ಬಡ್ತಿ ನೀಡಿ ವರ್ಗಾವಣೆ ಆದೇಶ ಹೊರಡಿಸಿದ್ದು, ಲಾಬೂರಾಮ್ ಅವರಿಂದ ತೆರವಾದ ಸ್ಥಾನಕ್ಕೆ ರಮಣ್ ಗುಪ್ತಾ ನಿಯೋಜನೆ ಮಾಡಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದು, ಹು-ಧಾ ಮಹಾನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ರಮಣ್ ಗುಪ್ತಾ ಆಗಮಿಸಲಿದ್ದಾರೆ.
ಕಲಬುರಗಿಯ ಐಜಿಪಿ ಎನ್. ಸತೀಶ್ ಕುಮಾರ್ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ. ಕಲಬುರಗಿಗೆ ಡಿಐಜಿಯಾಗಿ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅನುಪಮಾ ಅಗರ್ವಾಲ್ ಅವರನ್ನು ನೇಮಿಸಲಾಗಿದೆ. ಈ ಆದೇಶವನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಕಟ್ಟುನಿಟ್ಟಿನಿಂದ ಹೊಸ ವರ್ಷಾಚರಣೆಗೆ ಕಮಿಷನರ್ ಲಾಬೂರಾಮ್ ಸೂಚನೆ