ಬೀದರ್: ನೀರಿಲ್ಲದೆ ಬೇಸಿಗೆ ಕಾಲದಲ್ಲಿ ಬರಿದಾದ ಕಾರಂಜಾ ಜಲಾಶಯಕ್ಕೆ ಮಾಂಜ್ರಾ ನದಿಯಿಂದ ನೀರು ತುಂಬಿಸುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಜಿಲ್ಲಾ ಪ್ರವಾಸದ ವೇಳೆಯಲ್ಲಿ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ದಶಕಗಳಿಂದ ಕಾರಂಜಾ ಜಲಾಶಯದಲ್ಲಿ ಗರಿಷ್ಠ ಮಟ್ಟದ ನೀರು ಸಂಗ್ರಹವಾಗಿಲ್ಲ. ಹೀಗಾಗಿ ಮಹಾರಾಷ್ಟ್ರದಿಂದ ಜಿಲ್ಲೆಯ ಮೂಲಕವಾಗಿ ಹಾದು ಹೋಗುವ ಮಾಂಜ್ರಾ ನದಿಯ ನೀರನ್ನು ಕಾರಂಜಾ ಜಲಾಶಯಕ್ಕೆ ಹರಿಸಲು ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮಾಂಜ್ರಾ ನದಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಾಣ ಮಾಡಿ ಅಲ್ಲಿಂದ ನೀರು ಲಿಫ್ಟ್ ಮಾಡಿಕೊಳ್ಳಲಾಗುವುದು. ಇದರ ಸರ್ವೆ ಕಾರ್ಯಕ್ಕೆ ತಕ್ಷಣವೇ ಆದೇಶ ಹೊರಡಿಸುವುದಾಗಿ ಸಚಿವರು ತಿಳಿಸಿದ್ದಾರೆ.
ಈ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸಂಸದ ಭಗವಂತ ಖೂಬಾ, ಶಾಸಕರಾದ ಬಂಡೆಪ್ಪ ಕಾಶೆಂಪೂರ್, ರಾಜಶೇಖರ್ ಪಾಟೀಲ್, ರಹಿಂಖಾನ್, ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.