ಹುಬ್ಬಳ್ಳಿ : ನೂತನ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದರು. ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿದ್ದರು.
ಶೆಟ್ಟರ್ ನಿವಾಸದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಅಲ್ಲದೇ ಸಚಿವ ಸ್ಥಾನದ ಕುರಿತು ಮಾತನಾಡಿದ್ದಾರೆಂದು ಹೇಳಲಾಗಿದ್ದು, ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸದ್ಯ ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಪ್ರಯತ್ನ ಮಾಡುತ್ತೇನೆ : ಸುನೀಲ್ ಕುಮಾರ್