ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವ ಹಿನ್ನೆಲೆ ಜನಸಂದಣಿ ಪ್ರದೇಶಗಳಲ್ಲಿ ಜಿಲ್ಲಾಡಳಿತ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಆರಂಭಿಸಿದೆ.
ಮೊಬೈಲ್ ಫೀವರ್ ಕ್ಲಿನಿಕ್ ಬಸ್ ಮೂಲಕ ನಗರದ ಅಂಗಡಿಕಾರರು ಹಾಗೂ ಜನರನ್ನು ಪರೀಕ್ಷೆ ಮಾಡಲಾಗುತ್ತಿದೆ. ತಪಾಸಣೆಗೆ ಬಹುತೇಕರು ಹಿಂದೇಟು ಹಾಕುತ್ತಿದ್ದು, ಅಧಿಕಾರಿಗಳು ಅವರ ಮನವೊಲಿಸಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ ಎನ್ನಲಾಗಿದೆ.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಎಸಿ ಜುಬೇರ ಅಹ್ಮದ್, ತಹಶೀಲ್ದಾರ್ ಸಂತೋಷ ಬಿರಾದಾರ, ಎಸಿಪಿ ಅನುಷಾ ಅವರು ಸ್ಥಳಕ್ಕೆ ಆಗಮಿಸಿ ಜನರ ಮನವೊಲಿಸಿ ಟೆಸ್ಟ್ ಮಾಡಿಸುತ್ತಿದ್ದಾರೆ.