ಹುಬ್ಬಳ್ಳಿ: ಕಳೆದ ಕೆಲ ತಿಂಗಳಿಂದ ಖಾಲಿಯಿದ್ದ ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ನ ಡಿಸಿಪಿ (ಅಪರಾಧ ಮತ್ತು ಸಂಚಾರ) ಹುದ್ದೆಗೆ ಆರ್.ಬಿ. ಬಸರಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯವರಾದ ಬಸರಗಿಯವರು, ಬೆಂಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಎಸ್‌ಪಿಯಾಗಿದ್ದರು. 1994ನೇ ಬ್ಯಾಚಿನಲ್ಲಿ ಅವರು ಹಳೆ ಹುಬ್ಬಳ್ಳಿ ಠಾಣೆಯಲ್ಲಿ ಇನ್‌ಸ್ಟೆಕ್ಟರ್ ಆಗಿ ಕಾರ್ಯನಿರ್ವಹಿಸಿ ಡಿಎಸ್‌ಪಿಯಾಗಿ ಬಡ್ತಿ ಹೊಂದಿದ್ದರು.
ಪ್ರಸ್ತುತವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್ನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.