ETV Bharat / state

ಹುಬ್ಬಳ್ಳಿಯಲ್ಲಿ ಮತಾಂತರ ಗಲಾಟೆ: ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ - ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಪತಿಗೆ ಒತ್ತಡ

ಹಳೇ ಹುಬ್ಬಳ್ಳಿಯಲ್ಲಿ ಶಿಕ್ಕಲಗಾರ ಸಮುದಾಯವನ್ನು ಟಾರ್ಗೆಟ್ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರಿಸುವ ಕೆಲಸ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

conversion dispute in hubli
ಠಾಣೆಗೆ ಮುತ್ತಿಗೆ ಹಾಕಿದ ಹಿಂದೂ ಕಾರ್ಯಕರ್ತರು
author img

By

Published : Nov 16, 2022, 7:25 AM IST

Updated : Nov 16, 2022, 8:18 AM IST

ಹುಬ್ಬಳ್ಳಿ‌: ವಾಣಿಜ್ಯ ‌ನಗರಿ ಹುಬ್ಬಳ್ಳಿಯಲ್ಲಿ‌ ಮತ್ತೆ ಮತಾಂತರ ವಿವಾದ ಮುನ್ನೆಲೆಗೆ ಬಂದಿದೆ. ಹಳೇ ಹುಬ್ಬಳ್ಳಿಯ ಶಿಕ್ಕಲಗಾರ ಸಮುದಾಯದ ಕುಟುಂಬಗಳನ್ನು ಗುರಿಯಾಗಿಸಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿಕ್ಕಲಗಾರ ಸಮುದಾಯ ಹಾಗೂ ಹಿಂದೂ ಮುಖಂಡರು ರಾತ್ರಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಶಿಕ್ಕಲಗಾರ ಸಮುದಾಯದ ಕುಟುಂಬವೊಂದರಲ್ಲಿ ಮತಾಂತರದ ವಿಚಾರವಾಗಿ ದಂಪತಿಯ ನಡುವೆ ಬಿರುಕು ಮೂಡಿತ್ತು. ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಪತಿಗೆ ಒತ್ತಡ ಹಾಕಿದ್ದು, ಮತಾಂತರ ಆಗದಿದ್ದರೆ ಸಂಸಾರ ಮಾಡುವುದಿಲ್ಲವೆಂದು ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. ಇದರಿಂದ ಬೇಸತ್ತ ಪತಿ, ಈ ವಿಚಾರವನ್ನು ಸಮುದಾಯದ ಮುಖಂಡರ ಗಮನಕ್ಕೆ ತಂದಿದ್ದಾನೆ.

ಪೊಲೀಸ್‌ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಮತಾಂತರಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಸಹ ಹಲವು ಬಾರಿ ದಂಪತಿ ಠಾಣೆ ಮೆಟ್ಟಿಲೇರಿದ್ದು, ಪ್ರತಿ ಬಾರಿಯೂ ಪೊಲೀಸರು ರಾಜಿ ಮಾಡಿ‌ ಕಳುಹಿಸಿದ್ದಾರೆ. ಅಷ್ಟೇ ಅಲ್ಲದೇ, ಮತಾಂತರ ಆಗುವಂತೆ ಶಿಕ್ಕಲಗಾರ ಸಮುದಾಯದ ಕೆಲವರು ಹಾಗೂ ಕೆಲ ಕ್ರಿಶ್ಚಿಯನ್ ಮುಖಂಡರು ನನ್ನ ಪತ್ನಿಯ ತಲೆ ಕೆಡಿಸಿದ್ದಾರೆಂದು ಆರೋಪಿಸಿ ಸಂಪತ್ ಬಗನಿ ಎಂಬಾತ ರೌಡಿ ಶೀಟರ್ ಮದನ್ ಬುಗುಡಿ ಸೇರಿದಂತೆ ಹದಿನೈದು ಜನರ ವಿರುದ್ಧ ಮತಾಂತರದ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಮತಾಂತರಕ್ಕೆ ಯತ್ನ ಆರೋಪ: ಐವರು ಯುವಕರ ಬಂಧನ

ಇದೀಗ ಪ್ರಕರಣ ವಿಕೋಪಕ್ಕೆ ತಿರುಗಿದ್ದು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಶಿಕ್ಕಲಗಾರ ಸಮುದಾಯದ ಯುವಕರು ಹಾಗೂ ಹಿಂದೂ ಮುಖಂಡರು ಜಯತೀರ್ಥ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕ್ರಿಶ್ಚಿಯನ್ ಸಮುದಾಯ ಹಾಗೂ ಮತಾಂತರಕ್ಕೆ ಪ್ರೇರೇಪಣೆ ನೀಡುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಲವಂತದ ಮತಾಂತರಕ್ಕೆ ನನ್ನ ವಿರೋಧವಿದೆ: ವಿಪಕ್ಷ ಸಿದ್ದರಾಮಯ್ಯ

Last Updated : Nov 16, 2022, 8:18 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.