ಧಾರವಾಡ: ದೆಹಲಿಯ ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲೆಯ 34 ಜನರಲ್ಲಿ 17 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಇವರಲ್ಲಿ ನಿನ್ನೆ 17 ಜನರ ಗಂಟಲು ದ್ರವದ ಮಾದರಿಯನ್ನು ಕೋವಿಡ್ ತಪಾಸಣೆಗಾಗಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲಾ 17 ಜನರ ವರದಿಗಳು ನೆಗೆಟಿವ್ ಎಂದು ಬಂದಿವೆ.
ಇನ್ನುಳಿದ 17 ಜನರ ಮಾದರಿಗಳನ್ನು ಸಂಗ್ರಹಿಸಿ, ಇಂದು ತಪಾಸಣೆಗಾಗಿ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.