ಧಾರವಾಡ: ಕೆಎಸ್ಆರ್ಟಿಸಿ ನೌಕರರನ್ನು ಕೂಡ ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂದು ಧಾರವಾಡ ಜಿಲ್ಲಾ ಕೆಎಸ್ಆರ್ಟಿಸಿ ಎಸ್ಸಿ-ಎಸ್ಟಿ ನೌಕರರ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ನೌಕರರು, ನಿವೃತ್ತಿ ಬಳಿಕ ಉಳಿದ ಸರ್ಕಾರಿ ನೌಕರರಂತೆ ಪಿಂಚಣಿ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ವೇತನ ತಾರತಮ್ಯ ನಿವಾರಿಸಬೇಕು. ಪಿಂಚಣಿ ಜೊತೆ ಸರ್ಕಾರಿ ಸವಲತ್ತುಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.