ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.
ಗದಗದ ಕಾನೂನು ಕಾಲೇಜಿನ ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಶಂಕ್ರಪ್ಪ ಇತ್ತೀಚೆಗೆ ಪ್ರೊಫೆಸರ್ ಹುದ್ದೆಯಿಂದ ನಿವೃತ್ತಿ ಪಡೆದಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಅಳಿಯನಿಂದಲೇ ಮಾವನ ಕೊಲೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಶವ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ವಿದ್ಯಾನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.