ಹುಬ್ಬಳ್ಳಿ : ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಘಟನೆಗಳು ಹೊರ ಬೀಳುತ್ತಿವೆ. ಘಟನೆಯ ದಿನ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಲು ಸಂಚು ನಡೆಸಿದ್ದರು ಎಂದು ತಿಳಿದು ಬಂದಿದೆ.
ಭದ್ರತೆಗೆ ಆಮಿಸಿದ್ದ ಪಕ್ಕದ ಕಸಬಾ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ಇವರು ಕಣ್ಣು ಬಿದ್ದಿತ್ತಂತೆ. ಈ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು 15ಕ್ಕೂ ಹೆಚ್ಚು ಗಲಭೆಕೋರರು ಸುತ್ತುವರೆದಿದ್ದರು ಎನ್ನುವ ಮಾಹಿತಿ ಬಹಿರಂಗವಾಗಿದೆ.
ಈ ಸಂಬಂಧ ಪೊಲೀಸ್ ಸಿಬ್ಬಂದಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 10-15 ಗಲಭೆಕೋರರು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ದೂರು ದಾಖಲಿಸಿದ್ದಾರೆ.