ETV Bharat / state

ಮಣಿಪುರದಲ್ಲಿ ಗಲಭೆ, ಅಲ್ಲಿನ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಜಗದೀಶ್ ಶೆಟ್ಟರ್ - ನಂದಿನಿ ಹಾಲಿನ ದರ ಏರಿಕೆ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಬರಬೇಕಿದೆ. ಮಹಿಳೆಯರ ನಗ್ನ ಮೆರವಣಿಗೆ ಪೈಶಾಚಿಕ ಕೃತ್ಯ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Jagdish Shettar spoke to the media.
ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದರು.
author img

By

Published : Jul 22, 2023, 9:47 PM IST

Updated : Jul 22, 2023, 11:02 PM IST

ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದರು.

ಹುಬ್ಬಳ್ಳಿ: ಮಣಿಪುರದ ಗಲಭೆಗೆ ಮೂಲಭೂತ ಕಾರಣಗಳನ್ನು ಕೇಂದ್ರ ಸರ್ಕಾರ ಆರಂಭದಲ್ಲಿ ಹುಡುಕಬೇಕಿತ್ತು. ಆರಂಭದಲ್ಲಿ ಅಲ್ಲಿನ ರಾಜ್ಯ‌ ಸರ್ಕಾರ ಗಲಭೆ ತಡೆಯಲು ವಿಫಲವಾಗಿದೆ.‌ ಇದರಲ್ಲಿ ಮಣಿಪುರದ ಸಿಎಂ ಅವರ ವೈಫಲ್ಯಗಳು ಎದ್ದು ಕಾಣುತ್ತಿವೆ.‌ ಈ ಸಮಯದಲ್ಲಿ ಕೇಂದ್ರ ಸರ್ಕಾರದ ಮಧ್ಯಸ್ಥಿಕೆ ವಹಿಸಿ ಪರಿಹರಿಸಬೇಕಿತ್ತು. ಆದರೆ, ಇದು ಆಗದಿರುವ ಹಿನ್ನೆಲೆ ಈಗ ಅದು ವಿಕೋಪಕ್ಕೆ ಹೋಗಿದೆ ಎಂದು ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ವಿಶ್ಲೇಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನತೆ ಸಿಎಂ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಅಲ್ಲಿನ ಸಿಎಂ ಗಲಭೆಯ ನೈತಿಕ ಹೊಣೆ ಹೊತ್ತು ತಕ್ಷಣವೇ ಸಿಎಂ ರಾಜೀನಾಮೆ ನೀಡಬೇಕಿತ್ತು ಎಂದು ಆಪಾದನೆ ಮಾಡಿದರು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಬರಬೇಕಿದೆ. ಮಹಿಳೆಯರ ನಗ್ನ ಮೆರವಣಿಗೆ ಪೈಶಾಚಿಕ ಕೃತ್ಯ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೇಂದ್ರ ಸರ್ಕಾರ ಬರೀ ಬಾಯಿ ಮಾತಿನಲ್ಲಿ ಕಠಿಣ ಕ್ರಮ ಅನ್ನಬಾರದು ಇದು ಕಾರ್ಯರೂಪಕ್ಕೆ ಬರಬೇಕು ಎಂದು ಕೇಂದ್ರಕ್ಕೆ ಒತ್ತಾಯಿಸಿದರು.

ನಂದಿನಿ ಹಾಲಿನ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಬೇಕು ಎನ್ನುವ ಬಹಳಷ್ಟು ದಿನದಿಂದ ಸರ್ಕಾರದ ಮುಂದೆ ಇತ್ತು. ಈ ಬಗ್ಗೆ ರೈತ ಮತ್ತು ಸರಬರಾಜು ಮಾಡುವವರ ಜೊತೆಗೆ ಚರ್ಚೆ ನಡೆಯುತ್ತಿದೆ. ಎಲ್ಲ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಏನಾದರೂ ಯೋಜನೆ ಜಾರಿ ಮಾಡಬೇಕಾದರೆ, ದರ ಏರಿಕೆ ಅನಿವಾರ್ಯವಾಗುತ್ತದೆ. ಇನ್ನೂ ಜಾರಿಯಾಗಿಲ್ಲ‌. ಇನ್ನೂ ಸಮಯ ಇದೆ. ಇನ್ನೂ ಯಾವ ರೂಪದಲ್ಲಿ ಏರಿಕೆ ಆಗಲಿದೆ ನೋಡೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿಂದಿನ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯವೇ ಕಾರಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮಣಿಪುರದಲ್ಲಿ ಜಾತಿ, ಧರ್ಮ ಸಂಘರ್ಷವೂ ನಡೀತಾ ಇದೆ. ಹಿಂದಿನ ಸರ್ಕಾರಗಳ ತಪ್ಪುಗಳ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ಬೇರೆ ದೇಶದ ನುಸುಳುಕೋರರು ದಕ್ಷಿಣ ಭಾಗದಲ್ಲಿ ಜಮೆ ಆಗಿದ್ದಾರೆ. ಇವತ್ತು ನುಸುಳುಕೋರರನ್ನು ಹೊರ ಹಾಕುವ ಕೆಲಸ ಕೇಂದ್ರ ಸರ್ಕಾರ ನಿರಂತರವಾಗಿ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶಾನ್ಯ ಭಾಗದ ಎಲ್ಲ ರಾಜ್ಯಗಳನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ನಾರ್ತ್ ಈಸ್ಟ್ ನಲ್ಲಿ ಭಾರತೀಯರು ಅಂತ ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ, ಈಗ ಇಡೀ ನಾರ್ತ್ ಈಸ್ಟ್ ಎಲ್ಲ ರಾಜ್ಯಗಳಲ್ಲಿ ನಮ್ಮ ಭಾರತ ಅಂತಾರೆ. ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಹ ನಡೀತಾ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮೊದಲ ಬಾರಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಅವರು ನೋಡ್ತಾ ಇದ್ದಾರೆ. ಕೇಂದ್ರ ಸರ್ಕಾರ ನಾರ್ತ್ ಈಸ್ಟ್​​​​​​ನ ಎಲ್ಲಾ ರಾಜ್ಯಗಳಲ್ಲಿ ಶಾಂತಿ ನೆಲೆಸುವಂತಾಗಲೂ ನಿರಂತರ ಶ್ರಮಿಸುತ್ತಿದೆ ಎಂದರು.

ಇದನ್ನೂಓದಿ:ಮಣಿಪುರ ಬಳಿಕ ಪಶ್ಚಿಮಬಂಗಾಳದಲ್ಲಿ ಸಾರ್ವಜನಿಕವಾಗಿ ಮಹಿಳೆಯರ ವಿವಸ್ತ್ರಗೊಳಿಸಿ ಅಮಾನುಷ ಹಲ್ಲೆ

Last Updated : Jul 22, 2023, 11:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.