Live Video: ಪ್ರಾಣವನ್ನೇ ತೆಗೆಯಿತು ಅತಿ ವೇಗ..ಇಲ್ಲಿದೆ ಹುಬ್ಬಳ್ಳಿಯ ಭೀಕರ ಅಪಘಾತದ CCTV ದೃಶ್ಯ!! - ಹುಬ್ಬಳ್ಳಿಯ ಉಣಕಲ್ ಕೆರೆ ಬಳಿ ಭೀಕರ ಅಪಘಾತ
ಹುಬ್ಬಳ್ಳಿ ನಗರದ ಉಣಕಲ್ ಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಇಬ್ಬರು ಯುವಕರು ಮೃತಪಟ್ಟಿದ್ದರು. ಈ ದುರ್ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭಯಾನಕವಾಗಿವೆ.

ಹುಬ್ಬಳ್ಳಿ : ಉಣಕಲ್ ಕೆರೆ ಬಳಿಯಿರುವ ಹೋಟೆಲ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿದ್ದು, ಈ ದುರ್ಘಟನೆಯ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬುಧವಾರ ರಾತ್ರಿ ಉಣಕಲ್ ಕೆರೆ ಬಳಿಯ ಪ್ರೆಸಿಡೆಂಟ್ ಹೋಟೆಲ್ ಎದುರು ಬೈಕ್ನಲ್ಲಿ ಯುವಕರಿಬ್ಬರು ವೇಗವಾಗಿ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣದ ತಪ್ಪಿ ಬೈಕ್ ರಸ್ತೆಯ ಪಕ್ಕದಲ್ಲಿದ್ದ ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿದೆ.

ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕವಾಗಿದೆ.
ಘಟನೆ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.