ಹುಬ್ಬಳ್ಳಿ: ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ನಗರದ ವಿದ್ಯಾವನ ನಿವಾಸಿಗಳು ರಸ್ತೆಗುಂಡಿಗಳಿಗೆ ರಂಗೋಲಿ ಹಾಕಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಭಾವಚಿತ್ರವನ್ನು ಆ ಗುಂಡಿಯಲ್ಲಿ ಇಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹಾಳಾಗಿ ಹೋಗಿವೆ. ಎಲ್ಲೆಂದರಲ್ಲಿ ಗುಂಡಿಗಳು ಬಿದ್ದು ಜನರು ಓಡಾಡಲು ಸಾಧ್ಯವಾಗಂತಹ ಸ್ಥಿತಿಗೆ ಇಲ್ಲಿನ ರಸ್ತೆಗಳು ತಲುಪಿವೆ. ಹೀಗಾಗಿ ರಸ್ತೆ ದುರಸ್ತಿ ಹಾಗೂ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ರಸ್ತೆ ಗುಂಡಿಗೆ ರಂಗೋಲಿ ಹಾಕಿ, ರಸ್ತೆ ಗುಂಡಿ ಮತ್ತು ತಿಪ್ಪೆಯಲ್ಲಿ ಜಗದೀಶ್ ಶೆಟ್ಟರ್ ಅವರ ಫೋಟೋ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ ಕೂಡಲೇ ರಸ್ತೆ ದುರಸ್ತಿ ಹಾಗೂ ಕಸ ನಿರ್ವಹಣೆ ಮಾಡುವಂತೆ ಸ್ಥಳೀಯರು ಗಮನ ಸೆಳೆದರು.