ಹುಬ್ಬಳ್ಳಿ: ಭಾರೀ ಮಳೆಯಿಂದಾಗಿ ರಸ್ತೆಗಳು ಕೆಸರುಮಯವಾಗಿರುವುದಕ್ಕೆ ತಾಲೂಕಿನ ಕುಸುಗಲ್ ನಿವಾಸಿಗಳು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದ ವಾರ್ಡ್ ನಂಬರ್ 6ರ ಕಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ರಸ್ತೆ ಹಾಳಾಗಿದ್ದರು ಸಹ ಪಂಚಾಯತಿ ಅಧಿಕಾರಿಗಳು ಸುಗಮ ರಸ್ತೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ರೈತರು, ಕೂಲಿ ಕಾರ್ಮಿಕರು ಈ ರಸ್ತೆಯಲ್ಲಿ ಓಡಾಡುತ್ತಿದ್ದು, ಎಲ್ಲಿ ಕಾಲು ಜಾರಿ ಬೀಳುತ್ತೇವೆ ಎಂಬ ಭಯದಿಂದ ಸಂಚರಿಸುತ್ತಿದ್ದಾರೆ.
ಬೇಸಿಗೆ ವೇಳೆ ಸುಗಮ ರಸ್ತೆ ಮಾಡಿ ಎಂದು ಮನವಿ ಮಾಡಿದರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಆದಷ್ಟು ಬೇಗ ರಸ್ತೆ ನಿರ್ಮಾಣ ಮಾಡದೆ ಹೋದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.