ಹುಬ್ಬಳ್ಳಿ: ನಗರದ ಕೇಶ್ವಾಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಟೋರಿಯಸ್ ರೌಡಿಶೀಟರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರೌಡಿಯಬ್ಬನ ಹತ್ಯೆಗೆ ಹೊಂಚು ಹಾಕಿ ಕುಳಿತಿದ್ದ ವಿಜಯ್ ಬಿಜವಾಡ್ ಹಾಗೂ ನಾಲ್ವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಮೂರು ತಲ್ವಾರ್ ಸೇರಿ ಅಪಾರ ಪ್ರಮಾಣದ ಮಾರಕಾಸ್ತ್ರ ವಶಪಡಿಸಿಕೊಳ್ಳಲಾಗಿದೆ.
ಶಾಂತಿಭಂಗ, ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ವಿಜಯ್ ಬಿಜವಾಡ್ನನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿತ್ತು. ಆದ್ರೆ ಗಡಿಪಾರು ಆದೇಶವಿದ್ದರೂ ಈತ ಹುಬ್ಬಳ್ಳಿ ನಗರದಲ್ಲಿ ರಾಜರೋಷವಾಗಿ ಓಡಾಡುತ್ತಿದ್ದ ಎನ್ನಲಾಗಿದೆ. ರೌಡಿಶೀಟರ್ ರಹೀಂ ಬೇಪಾರಿ ಹತ್ಯೆಗೆ ಹೊಂಚು ಹಾಕಿ ಕುಳಿತಿದ್ದ ಈತನನ್ನು ಖಚಿತ ಮಾಹಿತಿ ಆಧಾರದ ಮೇಲೆ ಬಂಧಿಸಲಾಗಿದೆ.