ಹುಬ್ಬಳ್ಳಿ: ಶಾಲೆಯಲ್ಲಿ ಕಲಿತು ವಿದ್ಯಾವಂತರಾಗಿ ಈಗ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಹಳೇ ವಿದ್ಯಾರ್ಥಿಗಳ ಗುಂಪೊಂದು ಸರ್ಕಾರಿ ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ. ಶ್ರೀ ಸದ್ಗುರು ಸಿದ್ಧಾರೂಢರ ಹಳೇ ವಿದ್ಯಾರ್ಥಿಗಳ ಸಂಘದಿಂದ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಶಾಲೆಯ ಗೋಡೆಗಳಿಗೆ ಬಣ್ಣ ಹಚ್ಚುವ ಮೂಲಕ ಜಾಗೃತಿ ಮೂಡಿಸಿದರು.
ಶ್ರೀ ಸದ್ಗುರು ಸಿದ್ಧಾರೂಢರ ಹಳೇ ವಿದ್ಯಾರ್ಥಿಗಳ ಸಂಘವು ನಿರಂತರವಾಗಿ ನಗರದಲ್ಲಿ ಸ್ವಚ್ಛತಾ ಅಭಿಯಾನದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಸರ್ಕಾರಿ ಶಾಲೆ ಸೇರಿದಂತೆ ರುದ್ರಭೂಮಿಗಳಿಗೂ ಸಹ ಭೇಟಿ ನೀಡಿ, ಸ್ವಚ್ಛತೆಯ ಕುರಿತು ಅರಿವು ಮೂಡಿಸಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕರು ಸಹ ಸಾಥ್ ನೀಡಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ