ETV Bharat / state

ಬಿಜೆಪಿಯಿಂದ ಬೇಸತ್ತ ಜ‌ನರು ಬದಲಾವಣೆ ಬಯಸಿದ್ದಾರೆ: ಸಲೀಂ ಅಹ್ಮದ್ - ಹಾನಗಲ್​ ಉಪಚುನಾವಣೆ

ಈ ಬಾರಿ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Saleem  Ahmed Reaction on by election
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪ್ರತಿಕ್ರಿಯೆ
author img

By

Published : Oct 7, 2021, 7:15 PM IST

ಹುಬ್ಬಳ್ಳಿ: ಜನರು ಬಿಜೆಪಿ ಸರ್ಕಾರದ ಅಧಿಕಾರದಿಂದ ಬೇಸತ್ತು ಬದಲಾವಣೆ ಬಯಸಿದ್ದಾರೆ. ಈ ಬಾರಿ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ನಗರದಲ್ಲಿಂದು ಖಾಸಗಿ ಹೋಟೆಲ್​​​ನಲ್ಲಿನ ಸಭೆಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗುತ್ತದೆ ಉಸ್ತುವಾರಿ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದೇವೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಂಡ ಬಹುಮತದಿಂದ ಆರಿಸಿ ಬರುವ ವಿಶ್ವಾಸ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪ್ರತಿಕ್ರಿಯೆ

ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಐಟಿ ದಾಳಿಯ ಬಗ್ಗೆ ಬಿಜೆಪಿಯವರನ್ನೇ ಕೇಳಬೇಕು ಎಂದು ವ್ಯಂಗ್ಯವಾಡಿದರು. ಇನ್ನು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರುವ ಕುರಿತು ಮಾತನಾಡಿದ ಅವರು, ಜೆಡಿಎಸ್​ನವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಶಕ್ತಿ ಇಲ್ಲದಿದ್ದರೂ ವೋಟ್ ಒಡೆಯಲು ಈ ತಂತ್ರವನ್ನು ರೂಪಿಸಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ:ಉಪಸಮರ: ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೆ ಮಾತ್ರ ಪ್ರಚಾರ.. ಚುನಾವಣಾ ವೆಚ್ಚ 30.80 ಲಕ್ಷಕ್ಕೆ ಮಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.