ಧಾರವಾಡ: ಧಾರವಾಡ ಜಿ.ಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಬಂದಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ಮಾಜಿ ಸಚಿವ ಸಂತೋಷ ಲಾಡ್ ಭೇಟಿ ನೀಡಿದರು.
ಈಗಾಗಲೇ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶದಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡ ನಗರದ ಬಾರಾಕೊಟ್ರಿನಲ್ಲಿರುವ ವಿನಯ್ ಕುಲಕರ್ಣಿ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಸಂತೋಷ ಲಾಡ್ ಕುಲಕರ್ಣಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ನಂತರ ಕುಟುಂಬಸ್ಥರಿಂದ ಸಂತೋಷ ಲಾಡ್ ಮಾಹಿತಿ ಪಡೆದುಕೊಂಡರು.
ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಅಧಿಕಾರ ಶಾಶ್ವತ ಅಲ್ಲಾ, ಇದು ವಿನಯ್ ಕುಲಕರ್ಣಿ ಅವರಿಗೆ ಕೆಟ್ಟ ಸಮಯ. ಅವರೊಂದಿಗೆ ಪಕ್ಷ ಹಾಗೂ ಕಾರ್ಯಕರ್ತರಿದ್ದಾರೆ ಎಂದು ಧೈರ್ಯ ತುಂಬುವ ಮಾತುಗಳನ್ನಾಡಿದರು.