ETV Bharat / state

ಧಾರವಾಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ: ಪರಿಷ್ಕೃತ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ - coronavirus updates

ಧಾರವಾಡದಲ್ಲಿ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ವಿಧಿಸಿದ್ದ ನಿಷೇಧಾಜ್ಞೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮಾರ್ಚ್​ 31ರವರೆಗೆ ಎಲ್ಲಾ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ.

Section 144 Continued in Dharwad
ಧಾರವಾಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ
author img

By

Published : Mar 22, 2020, 7:42 PM IST

ಧಾರವಾಡ: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾಕ್ರಮವಾಗಿ ಜಿಲ್ಲೆಯಲ್ಲಿ ಮಾ. 21ರಿಂದ 31ರವರೆಗೆ ವಿಧಿಸಿರುವ ನಿಷೇಧಾಜ್ಞೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ಹೀಗಾಗಿ ಜಿಲ್ಲೆಯಾದ್ಯಂತ ಮೆರವಣಿಗೆ, ಸಭೆ, ಸಮಾರಂಭ, ಸಂತೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ, ಕ್ರೀಡಾಕೂಟ, ಕೋಚಿಂಗ್ ಕ್ಲಾಸ್ ಹಾಗೂ ಸ್ಟಡಿ ಸೆಂಟರ್​ಗಳು ಸೇರಿದಂತೆ ಎಲ್ಲವನ್ನೂ ನಿಷೇಧಿಸಲಾಗಿದೆ.

ಧಾರವಾಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಪರಿಷ್ಕೃತ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಈ ಬಗ್ಗೆ ಪರಿಷ್ಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ದೀಪಾ ಚೋಳನ್​, ದಿನ ಬಳಕೆ ವಸ್ತುಗಳು, ಪರೀಕ್ಷಾ ಕೇಂದ್ರಗಳು ಮತ್ತು ಶವ ಸಂಸ್ಕಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.