ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಮಠವಾಗಿರುವ ಮೂರುಸಾವಿರ ಮಠದ ಉತ್ತರಾಧಿಕಾರದ ಹಿನ್ನೆಲೆಯಲ್ಲಿ ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಇದೇ 23ರಂದು ಬಹಿರಂಗ ಸಭೆ ಆಯೋಜಿಸಲಾಗಿದೆ.
ಈ ಸಭೆಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕೆಂದು ಹುಬ್ಬಳ್ಳಿ ಮೂರುಸಾವಿರ ಮಠದ ಸದ್ಭಕ್ತ ಮಂಡಳಿಯವರು ಪೊಲೀಸ್ ಆಯುಕ್ತ ಆರ್.ದಿಲೀಪ್ ಅವರಿಗೆ ಮನವಿ ಸಲ್ಲಿಸಿದರು.
ಫೆ. 23ರಂದು ಬೆಳಗ್ಗೆ 10-30ಕ್ಕೆ ಮೂರುಸಾವಿರ ಮಠದ ಆವರಣದಲ್ಲಿ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಸಭೆಗೆ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಭದ್ರತೆ ನಿಯೋಜನೆ ಮಾಡಬೇಕೆಂದು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಪೊಲೀಸ್ ಆಯುಕ್ತ ಆರ್.ದೀಲಿಪ್, ಪೊಲೀಸ್ ಭದ್ರತೆ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪ್ರಕಾಶ ಬೆಂಡಿಗೇರಿ, ಡಿ.ಟಿ.ಪಾಟೀಲ, ಶೇಖಣ್ಣ ಬೆಂಡಿಗೇರಿ, ಮಂಜುನಾಥ ಹಳ್ಯಾಳ, ಶೇಖರ ಪಾಟೀಲ ಸೇರಿದಂತೆ ಇತರರು ಇದ್ದರು.