ಹುಬ್ಬಳ್ಳಿ: ನಗರದ ಐಟಿ ಪಾರ್ಕ್ನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ನಿಯಮಿತದಲ್ಲಿ ಸೆಕ್ಯುರಿಟಿ ಗಾರ್ಡ್ವೋರ್ವನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚನ್ನಮಲ್ಲಯ್ಯ ಶೇಖಯ್ಯ ಹಿರೇಮಠ (44) ಮೃತ ವ್ಯಕ್ತಿ. ಈತ ಮೂಲತಃ ಧಾರವಾಡದ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಹುಬ್ಬಳ್ಳಿಯ ನೇಕಾರನಗರದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಎಂದು ತಿಳಿದುಬಂದಿದೆ.
ಈತ ಐಟಿ ಪಾರ್ಕ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಎಂದಿನಂತೆ ಕೆಲಸಕ್ಕೆ ಬಂದಿದ್ದು, ಇಂದು ತಾನು ಕೆಲಸ ಮಾಡುತ್ತಿದ್ದ ಕಚೇರಿಯ ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: ಬಂಧಿತ 10 ಆರೋಪಿಗಳು 11 ದಿನ ಪೊಲೀಸ್ ಕಸ್ಟಡಿಗೆ
ಘಟನೆಗೆ ಕಾರಣ ಇನ್ನೂ ಎಂಬುದು ತಿಳಿದುಬಂದಿಲ್ಲ. ಪೊಲೀಸ್ ತನಿಖೆಯ ನಂತರವೇ ಘಟನೆಗೆ ಸೂಕ್ತ ಕಾರಣ ಹಾಗೂ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.