ಹುಬ್ಬಳ್ಳಿ: ವಿನಯ ಕುಲಕರ್ಣಿ ಬಂಧನ ರಾಜಕೀಯ ವಾಕ್ಸಮರಕ್ಕೆ ಕಾರಣವಾಗುತ್ತಿದ್ದಂತೆ ನಗರದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ಮನೆಗೆ ಭದ್ರತೆ ಹೆಚ್ಚಿಸಲಾಗಿದೆ.
ವಿನಯ ಕುಲಕರ್ಣಿ ಬಂಧನ ಖಂಡಿಸಿ ಜಿಲ್ಲೆಯ ಕೆಲವು ಕಡೆ ಪ್ರತಿಭಟನೆಗಳು ನಡೆದಿದ್ದವು. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.